Log In
BREAKING NEWS >
ಮಂಗಳೂರು ಕಡಲ ತೀರದಲ್ಲಿ ಟೌಕ್ಟೇ ಚಂಡಮಾರುತ ಅಬ್ಬರಕ್ಕೆ ಸಿಲುಕಿದ್ದ 9 ಮಂದಿಯ ರಕ್ಷಣೆ: ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ...

ಎರಡು ಬೈಕ್ ಗಳ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು  ಹಳೆಯಂಗಡಿಯ ತೋಕೂರು ಸರಕಾರಿ ಶಾಲೆಯ ಬಳಿ ಇಂದು ಎರಡು ಬೈಕ್ ಗಳ ನಡುವೆ  ನಡೆದ ಅಪಘಾತದಲ್ಲಿ ಹಿಂದಿನಿಂದ ಬಂದ ಬಸ್ಸು ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಮೃತಪಟ್ಟ ಬೈಕ್ ಸವಾರನ ಹೆಸರು ಮೂಡಬಿದ್ರಿ ಪರಿಸರದ ಮೋಕ್ಷಿತ್ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಕಿನ್ನಿಗೋಳಿ ಕಡೆ ಚಲಿಸುವ ಬೆಸಿಲಿಕಾ ಎಂಬ ಹೆಸರಿನ ಸರ್ವಿಸ್ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment