Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಕ್ಯಾಲಿಫೋರ್ನಿಯಾ ಡೇವಿಸ್ ಸೆಂಟ್ರಲ್ ಪಾರ್ಕ್ ನಲ್ಲಿ ದುಷ್ಕರ್ಮಿಗಳಿಂದ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಖಂಡನೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ವಿದೇಶಾಂಗ ಸಚಿವಾಲಯ ಬಲವಾಗಿ ಖಂಡಿಸಿದೆ.

ಮೊನ್ನೆ ಜನವರಿ 28ರಂದು ದುಷ್ಕರ್ಮಿಗಳು ಕ್ಯಾಲಿಫೋರ್ನಿಯಾದ ಡೇವಿಸ್ ಸೆಂಟ್ರಲ್ ಪಾರ್ಕ್ ನಲ್ಲಿ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು. ಪ್ರತಿಮೆಯನ್ನು ಭಾರತ ಸರ್ಕಾರ 2016ರಲ್ಲಿ ಉಡುಗೊರೆಯಾಗಿ ನೀಡಿತ್ತು. ಪ್ರಪಂಚವೇ ನೆಚ್ಚಿಕೊಂಡ ಶಾಂತಿ ಮತ್ತು ನ್ಯಾಯದ ಪ್ರತೀಕವಾಗಿದ್ದ ನಾಯಕನ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಕ್ರಮ ದುರುದ್ದೇಶಪೂರ್ವಕವಾಗಿದ್ದು ಖಂಡನೀಯ ಕೃತ್ಯವೆಂದು ವಿದೇಶಾಂಗ ಸಚಿವಾಲಯ ಹೇಳಿದೆ.

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅಮೆರಿಕ ಸರ್ಕಾರ ಸಮಗ್ರ ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಸಾನ್ ಫ್ರಾನ್ಸಿಸ್ಕೊದಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಪ್ರತ್ಯೇಕವಾಗಿ ಪ್ರಕರಣವನ್ನು ತೆಗೆದುಕೊಂಡು ಸಿಟಿ ಆಫ್ ಡೇವಿಸ್ ಮತ್ತು ಸ್ಥಳೀಯ ಜಾರಿ ನಿರ್ದೇಶನಾಲಯ ಅಧಿಕಾರಿಗಳೊಂದಿಗೆ ತನಿಖೆ ನಡೆಸಲು ಮುಂದಾಗಿದೆ.

ಡೇವಿಸ್ ಮೇಯರ್ ವಿಷಾದ: ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಡೇವಿಸ್ ಮೇಯರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದು ತನಿಖೆ ಆರಂಭಿಸಿದ್ದೇವೆ ಎಂದರು. ಧ್ವಂಸ ಘಟನೆಯನ್ನು ಖಂಡಿತಾ ಒಪ್ಪಲು ಸಾಧ್ಯವಿಲ್ಲ, ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

No Comments

Leave A Comment