Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಪ್ರತಿಭಟನಾ ಸ್ಥಳಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ: ಸರ್ಕಾರಕ್ಕೆ ರೈತರ ಆಗ್ರಹ

ನವದೆಹಲಿ: ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಭಾಗದಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು, ಪುನಃ ಸಂಪರ್ಕ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

ದೆಹಲಿ-ಎನ್ ಸಿಆರ್ ಭಾಗಗಳಲ್ಲಿ ಕೇಂದ್ರ ಸರ್ಕಾರ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿತ್ತು. ಈ ಕ್ರಮವನ್ನು ವಿರೋಧಿಸಿರುವ ರೈತರ ಸಂಘಟನೆಯಾಗಿರುವ ಕ್ರಾಂತಿಕಾರಿ ಕಿಸಾನ್ ಸಂಘಟನೆಯಾಗಿರುವ ದರ್ಶಲ್ ಪಾಲ್ ಸರ್ಕಾರ ಸ್ಥಗಿತಗೊಳಿಸಿರುವ ಸೇವೆಗಳನ್ನು ಮರು ಸ್ಥಾಪಿಸಬೇಕು ಎಂದು ಹೇಳಿದ್ದಾರೆ.

ಒಂದು ವೇಳೆ ಸರ್ಕಾರ ಸೇವೆಗಳನ್ನು ನೀಡದೇ ಇದ್ದಲ್ಲಿ, ಮತ್ತೆ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ. ಸಿಂಘು ಗಡಿ ಭಾಗದಲ್ಲಿ ಪ್ರತಿಭಟನಾ ನಿರತ ರೈತರನ್ನು ಒತೆರವುಗೊಳಿಸುವದಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರತಿಭಟನಾ ಸ್ಥಳವನ್ನು ಬಿಟ್ಟು ತೆರಳುವಂತೆ ರೈತ ಸಂಘಟನೆಗಳ ನಾಯಕರಿಗೆ ಜಿಲ್ಲಾಧಿಕಾರಿಗಳು ನೊಟೀಸ್ ಜಾರಿಗೊಳಿಸಿದ್ದರು. ಈ ಬೆನ್ನಲ್ಲೇ ಪ್ರತಿಭಟನಾ ನಿರತ ಸ್ಥಳಗಳಲ್ಲಿ ನೀರು, ಇಂಟರ್ ನೆಟ್ ಮುಂತಾದ  ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಮತ್ತಷ್ಟು ಕೆರಳಿದ್ದಾರೆ.

No Comments

Leave A Comment