Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಉತ್ತರ ಪ್ರದೇಶ: ಮೊರದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಮಿನಿ ಬಸ್-ಟ್ರಕ್ ಢಿಕ್ಕಿ; 10 ಪ್ರಯಾಣಿಕರು ಸಾವು, 10 ಮಂದಿಗೆ ಗಾಯ

ಲಕ್ನೊ: ಉತ್ತರ ಪ್ರದೇಶದ ಮೊರದಾಬಾದ್-ಆಗ್ರಾ ಹೆದ್ದಾರಿಯ ಕುಂಡರ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಿನಿ ಬಸ್ ಮತ್ತು ಕ್ಯಾಂಟರ್ ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು 10 ಮಂದಿಗೆ ಗಾಯವಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಲ್ಲದೆ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸದ್ಯ ಢಿಕ್ಕಿ ನಡೆದ ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮುಗಿದಿದ್ದು ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಮೂರು ವಾಹನಗಳು ಪರಸ್ಪರ ಢಿಕ್ಕಿ ಹೊಡೆದಿವೆ. ಓವರ್ ಟೇಕ್ ಮಾಡುವ ಭರದಲ್ಲಿ ವಾಹನಗಳು ಢಿಕ್ಕಿ ಹೊಡೆದಿವೆ ಎಂದು ಪ್ರತ್ಯಕ್ಷ ಸಾಕ್ಷಿಗಳು ತಿಳಿಸಿದ್ದಾರೆ.

No Comments

Leave A Comment