Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಡ್ಯೂಟಿ ವೇಳೆ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಜೊತೆ ಎಣ್ಣೆ ಪಾರ್ಟಿ: ಸಿಸಿಬಿಯ 8 ಸಿಬ್ಬಂದಿ ಎತ್ತಂಗಡಿ

ಮಂಗಳೂರು: ಕರ್ತವ್ಯದ ವೇಳೆ ಬಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆರೋಪಿಯೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ 8 ಮಂದಿ ಪೊಲೀಸರನ್ನು ಮಂಗಳೂರು ಸಿಸಿಬಿ ಎತ್ತಂಗಡಿ ಮಾಡಿದೆ.

ಮೂರು ಎಎಸ್ಐ ಗಳು ಮತ್ತು ಐದು ಮಂದಿ ಮುಖ್ಯ ಪೇದೆಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್​ ಆಯುಕ್ತ ಶಶಿಕುಮಾರ್ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ತನಿಖೆಯ ಆಧಾರದ ಮೇಲೆ 8 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿಯನ್ನು ‌ನಗರದ ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದ್ದು, ಜೊತೆಗೆ, ಸಿಸಿಬಿ ಘಟಕದ 8 ಸಿಬ್ಬಂದಿ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಮೂವರು ಎಎಸ್ಐಗಳು ಹಾಗು ಐದು ಮಂದಿ ಮುಖ್ಯ ಪೇದೆಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಟ್ಟಿಂಗ್ ಆರೋಪಿ ಜೊತೆ ಪಾರ್ಟಿ ಮಾಡಿರುವುದು ಇಲಾಖೆಗೆ ಮುಜುಗರ ತರುವಂತಹದ್ದು, ಇದರಿಂದ ಇಲಾಖೆ ಮೇಲಿನ ನಂಬಿಕೆಗೆ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಕುತ್ತಾರು ಬಳಿಯ ಬಾರ್​ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸಿಸಿಬಿ ಘಟಕದ 8 ಸಿಬ್ಬಂದಿ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಜೊತೆ ಹಾಡಹಗಲೇ ಎಣ್ಣೆ ಪಾರ್ಟಿ ಮಾಡಿದ್ದರು. ಬಾರ್ ಬಳಿ ಸರ್ಕಾರಿ ವಾಹನ ನಿಲ್ಲಿಸಿ ಪಾರ್ಟಿ ಮಾಡಿದ್ದ ಆರೋಪ ಕೇಳಿಬಂದಿತ್ತು. ಜೊತೆಗೆ, ಸಿಸಿಬಿ ಪೊಲೀಸರ ಪಾರ್ಟಿ ಮಾಡಿದ್ದ ವಿಡಿಯೋ ಸಹ ವೈರಲ್ ಆಗಿತ್ತು.

No Comments

Leave A Comment