Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಪೊಲೀಸ್ ಅಧಿಕಾರಿಗೆ ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಡೌರಿ ಕೇಸ್ ದಾಖಲಿಸಿದ ಮಹಿಳಾ ಐಪಿಎಸ್!

ಬೆಂಗಳೂರು: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರ ಜೀವನದಲ್ಲಿ ಕೌಟುಂಬಿಕ ಸಮಸ್ಯೆ ತಲೆದೋರಿದೆ.

ರಾಜ್ಯ ಕೆಎಸ್ಆರ್ ಪಿ ತರಬೇತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವರ್ತಿಕಾ ಕಟಿಯಾರ್ ತನ್ನ ಪತಿ ನಿತಿನ್ ಶುಭಾಶ್ ಯೋಲಾ ಮತ್ತು ಅವರ ಕುಟುಂಬದ ಏಳು ಮಂದಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಪತಿ ನಿತೀನ್‌ ಸುಭಾಶ್‌, ಅವರ ತಾಯಿ, ಸಹೋದರ, ಸೇರಿ ಕುಟುಂಬಸ್ಥರು ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ವರ್ತಿಕಾ ಅವರು ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ನಿತೀನ್‌ ಸುಭಾಶ್‌ ಸಹಿತ ಒಟ್ಟು 7 ಮಂದಿ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವ ಬೆದರಿಕೆ, ವಂಚನೆ ಆರೋಪಗಳ ಅನ್ವಯ ಎಫ್ಐಆರ್‌ ದಾಖಲಾಗಿದ

2010 ನೇ ಸಾಲಿನ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಮಹಾರಾಷ್ಟ್ರ ಮೂಲದ 2009 ನೇ ಬ್ಯಾಚ್ ನ ಐಎಫ್ಎಸ್ ( ಫಾರಿನ್ ಸರ್ವೀಸ್ ) ಅಧಿಕಾರಿ ನಿತೀನ್ ಸುಭಾಸ್ ಅವರನ್ನು ಪ್ರೀತಿಸಿ 2011 ರಲ್ಲಿ ಮದುವೆಯಾಗಿದ್ದರು.

ನಿತಿನ್ ಕೊಲಂಬೋ ಸೇರಿದಂತೆ ವಿದೇಶಿ ರಾಯಭಾರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮದುವೆಯಾದ ಕೆಲವೇ ದಿನಕ್ಕೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿತ್ತು. ಇದೀಗ ಪತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ.

No Comments

Leave A Comment