Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ದೆಹಲಿಯಲ್ಲಿ ಬೆಂಕಿ ಅವಘಡ, ಆಸ್ತಿ-ಪಾಸ್ತಿ, ಅನೇಕ ಮನೆಗಳಿಗೆ ಹಾನಿ

ನವದೆಹಲಿ: ದೆಹಲಿಯ ಓಖ್ಲಾ ಎರಡನೆ ಹಂತದ ಸಂಜಯ್ ಕಾಲೋನಿಯ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ.

ಪ್ರಾಥಮಿಕ ವರದಿಗಳ ಪ್ರಕಾರ ಭಾನುವಾರ ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಮಧ್ಯರಾತ್ರಿ ಯಲ್ಲಿ ಈ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಪ್ರದೇಶದ ನಿವಾಸಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಕತ್ರಾನ್‌ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಕಾರ್ಖಾನೆ ಅಕ್ಕಪಕ್ಕದಲ್ಲಿದ್ದ ಗುಡಿಸಲುಗಳಿಗೆ ಬೆಂಕಿ ಆವರಿಸಿದೆ. ಪರಿಣಾಮ 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಹೋಗಿವೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತನಿಖೆ ಮುಂದುವರಿಸಿದ್ದೇವೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಜಾನೆ 2.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಒಟ್ಟು 30 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಗ್ನಿದಳದ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment