ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ನಮ್ಮ ದೇಶವನ್ನು ಭವಿಷ್ಯದಲ್ಲಿ ಮುನ್ನಡೆಸಿದರೆ ಸಂತೋಷವಾಗುತ್ತದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಬೆಂಗಳೂರು: ವಿದ್ಯಾಭ್ಯಾಸದಲ್ಲಿ ಹೆಣ್ಣು ಮಕ್ಕಳು ಸಾಧನೆ ಮಾಡಿ ಜೀವನದಲ್ಲಿ ಮುಂದೆ ಬರುತ್ತಿರುವುದು ಪ್ರಶಂಸನೀಯ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೆ ಭಾಗವಹಿಸಿ ಮಾತನಾಡಿದರು.
ಈ ಬಾರಿ ವಿಶ್ವ ವಿದ್ಯಾಲಯದ 11 ಮಂದಿ ಚಿನ್ನದ ಪದಕ ವಿಜೇತರಲ್ಲಿ 87 ಮಂದಿ ಹೆಣ್ಣುಮಕ್ಕಳು ಎಂದು ಕೇಳಿ ತಿಳಿದುಕೊಳ್ಳಲ್ಪಟ್ಟೆ, ಅದು ಶೇಕಡಾ 80ರಷ್ಟು ಇದ್ದು, ನಿಜಕ್ಕೂ ಇದು ಉತ್ತಮ ಸಾಧನೆ. ಮುಂದಿನ ದಿನಗಳಲ್ಲಿ ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದೇಶವನ್ನು ಮಹಿಳೆಯರು ಮುನ್ನಡೆಸಿದರೆ ನಿಜಕ್ಕೂ ಸಂತೋಷವಾಗುತ್ತದೆ ಎಂದು ರಾಮನಾಥ್ ಕೋವಿಂದ್ ಹೇಳಿದರು.