Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಚೆನ್ನೈ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 337 ರನ್ ಗೆ ಆಲೌಟ್

ಚೆನ್ನೈ: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ 337 ರನ್ ಗಳಿಗೆ ಆಲೌಟ್ ಆಗಿದೆ.

ನಿನ್ನೆ ಭಾರತ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 257 ಸೇರಿಸಿತ್ತು. ಇಂದು ಭಾರತ ತಂಡ 337 ರನ್ ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಕೊಹ್ಲಿ ಪಡೆ 241 ರನ್ ಗಳ ಹಿನ್ನಡೆ ಅನುಭವಿಸಿದೆ.  ನಿನ್ನೆ ಭಾರತ ತಂಡದ ಬ್ಯಾಟಿಂಗ್ ಆಸರೆಯಾಗಿದ್ದ ವಾಷಿಂಗ್ಟನ್ ಸುಂದರ್ ಇಂದೂ ಕೂಡ ತಮ್ಮ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದರು. ಸುಂದರ್ 85 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಸುಂದರ್ ಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ದೊರೆಯಲಿಲ್ಲ.

ಒಂದು ಹಂತದಲ್ಲಿ ಅಶ್ವಿನ್ ಕ್ರೀಸ್ ನಲ್ಲಿ ಗಟ್ಟಿಯಾಗಿ ನೆಲೆಯೂರುವ ಪ್ರಯತ್ನ ಮಾಡಿದರಾದರೂ ಅವರ ಹೋರಾಟ 31 ರನ್ ಗಳಿಗೆ ಸೀಮಿತವಾಯಿತು. ಜಾಕ್ ಲೀಚ್ ಅಶ್ವಿನ್ ರನ್ನು ಔಟ್ ಮಾಡಿದರು. ಬಳಿಕ ಬಂದ ನದೀಂ ಶೂನ್ಯಕ್ಕೆ ಲೀಚ್ ಗೆ ವಿಕೆಟ್ ಒಪ್ಪಿಸಿದರು. ಇಶಾಂತ್ ಶರ್ಮಾ 4 ರನ್ ಗಳಿಸಿ ಔಟ್ ಆದರೆ, ಜಸ್ ಪ್ರೀತ್ ಬುಮ್ರಾ ಕೇವಲ ಎರಡು ಎಸೆತ ಎದುರಿಸಿ ಔಟ್ ಆದರು.

ಅಂತಿಮವಾಗಿ ಭಾರತ ತಂಡ 337 ರನ್ ಗಳಿಗೆ ಆಲೌಟ್ ಆಗಿ 241 ರನ್ ಗಳ ಹಿನ್ನಡೆ ಅನುಭವಿಸಿತು. ಇಂಗ್ಲೆಂಡ್ ಪರ ಜೇಮ್ಸ್ ಆ್ಯಂಡರ್ಸನ್, ಜೋಫ್ರಾ ಆರ್ಚರ್, ಜಾಕ್ ಲೀಚ್ ತಲಾ 2 ವಿಕೆಟ್ ಪಡೆದರೆ, ಡೊಮೆನಿಕ್ ಬೆಸ್ 4 ವಿಕೆಟ್ ಪಡೆದು ಮಂಚಿದರು.

2ನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್
ಇನ್ನು 241 ರನ್ ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡ 2ನೇ ಇನ್ನಿಂಗ್ಸ್ ಆರಂಭಿಸಿದ್ದು, ಮೊದಲ ಎಸೆತದಲ್ಲೇ ಅಶ್ವಿನ್ ಇಂಗ್ಲೆಂಡ್ ಗೆ ಆಘಾತ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್ ನಲ್ಲಿ ಮೊದಲ ಎಸೆತದಲ್ಲೇ ರೋರಿ ಬರ್ನ್ಸ್ ಅವರನ್ನು ಅಶ್ವಿನ್ ಔಟ್ ಮಾಡಿದ್ದಾರೆ.

No Comments

Leave A Comment