Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಸರ್ಕಾರ ನಿರ್ಧಾರ

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಪ್ರಾರಂಭಿಸಲಾದ ‘ ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ”ಯನ್ನು ಮುಂದುವರಿಸುವ ಉದ್ದೇಶವಿಲ್ಲ ಎಂದು ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ರಾಜ್ಯಸಭೆಯಲ್ಲಿ, ಗ್ರಾಹಕ, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ದನ್ವೆ ರೌಸಾಹೇಬ್ ಅವರು ಪೂರಕ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಈ ಯೋಜನೆಯನ್ನು ಕೊರೋನಾ ಅವಧಿಗೆ ಮಾತ್ರ ಮೀಸಲಾಗಿರುವುದರಿಂದ ಅದನ್ನು ಮೀರಿ ಮುಂದುವರಿಯುವ ಯಾವುದೇ ಯೋಜನೆಗಳಿಲ್ಲ ಎಂದು ಅವರು ಹೇಳಿದರು.

ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಮಾರ್ಚ್ 2020ರಲ್ಲಿ ಪ್ರಾರಂಭಿಸಲಾಯಿತು ಮತ್ತು ಅದರ ಅಡಿಯಲ್ಲಿ ಸರ್ಕಾರವು ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿತು.

ರಾಜ್ಯಸಭೆಯಲ್ಲಿ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರ ಆಹಾರ ಧಾನ್ಯಗಳನ್ನು ಸರಿಯಾಗಿ ಸಂಗ್ರಹಿಸುತ್ತದೆ ಮತ್ತು 2014ರಿಂದೀಚೆಗೆ, ಯಾವುದೇ ವ್ಯಕ್ತಿಯು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಕೊಳೆತ ಧಾನ್ಯಗಳನ್ನು ಪಡೆದಿಲ್ಲ. ಆಹಾರ ಧಾನ್ಯಗಳನ್ನು ತಲುಪಿಸಲು ಸರ್ಕಾರ ಈಗ ದೂರದ ಪ್ರದೇಶಗಳಲ್ಲಿರುವ ಜನರನ್ನು ತಲುಪುತ್ತಿದೆ ಎಂದು ಹೇಳಿದ್ದಾರೆ.

No Comments

Leave A Comment