ಹಾಸನ ಹೆದ್ದಾರಿಯಲ್ಲಿ ಕಂಟೇನರ್ ಗೆ ಕಾರು ಡಿಕ್ಕಿ: ಅಬಕಾರಿ ಎಸ್ಐ ಸೇರಿ ಸ್ಥಳದಲ್ಲೇ ನಾಲ್ವರು ಸಾವು
ಹಾಸನ: ಕಂಟೇನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ನಾಲ್ವರು ಬೆಂಗಳೂರು ಮೂಲದವರಾಗಿದ್ದಾರೆ.
ಈ ನಾಲ್ವರು ಸ್ನೇಹಿತರು ಬೆಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಮಂಗಳೂರಿನತ್ತ ಹೊರಟಿದ್ದ ಕಂಟೇನರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.