ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. 90 ವರ್ಷದ ರಾಮಾ ಜೋಯಿಸ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶಿವಮೊಗ್ಗ ಮೂಲದ ರಾಮಾ ಜೋಯಿಸ್ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 1931ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿದ ರಾಮಾ ಜೋಯಿಸ್ ಅವರು, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದರು ಇದರ ಜೊತೆಗೆ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇದರ ಜೊತೆಗೆ, ರಾಜ್ಯದಿಂದ ರಾಜ್ಯಸಭೆಗೂ ಆಯ್ಕೆಯಾಗಿದ್ದರು. 1975-77ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಅವರ ನಿಧನಕ್ಕೆ ಸಚಿವ ರಮೇಶ್ ಜಾರಕಿ ಹೋಳಿ ಸೇರಿದಂತೆ ಅನೇಕ ಸಚಿವರು, ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಸಚಿವ ಸುರೇಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀರಾಮುಲು ಟ್ವೀಟ್ ಮಾಡಿ, ರಾಜ್ಯಸಭೆಯ ಮಾಜಿ ಸದಸ್ಯರು, ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆಬಹಳ ನೋವಾಗಿದೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ರಾಜಾಜಿನಗರದ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದೆ. Share this:TweetWhatsAppEmailPrintTelegram