Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಶ್ರೇಯಾಂಕ; 2ನೇ ಸ್ಥಾನಕ್ಕೇರಿದ ಭಾರತ!

ಚೆನ್ನೈ: ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಚೆನ್ನೈನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ 317ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ಐಸಿಸಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಲ್ಲಿ 2ನೇ ಸ್ಥಾನಕ್ಕೇರಿದೆ.

ಹೌದು..ಈ ಹಿಂದೆ ಮೊದಲ ಟೆಸ್ಟ್ ಪಂದ್ಯದ ಬಳಿಕ ಐಸಿಸಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದ ಭಾರತ ತಂಡ 2ನೇ ಟೆಸ್ಟ್ ಪಂದ್ಯದ ಭರ್ಜರಿ ಗೆಲುವಿನ ಮೂಲಕ ಮತ್ತೆ 2ನೇ ಸ್ಥಾನಕ್ಕೇರಿದೆ. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಟೇಬಲ್ ನಲ್ಲಿ ಭಾರತದ ಗೆಲುವಿನ ಶೇಕಡಾವಾರು ಶೇ.69.7ಕ್ಕೆ ಏರಿಕೆಯಾಗಿದ್ದು, ಪಟ್ಟಿಯಲ್ಲಿ 460 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದೆ.

ಇನ್ನು ಶೇ.70ರಷ್ಟು ಗೆಲುವಿನ ಶೇಕಡಾವಾರು ಮತ್ತು 420 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ತಂಡ ಅಗ್ರ ಸ್ಥಾನದಲ್ಲಿದ್ದು, ಈ ಹಿಂದೆ 2ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ತಂಡ ಶೇ.69.2ರಷ್ಟು ಗೆಲುವಿನ ಶೇಕಡಾವಾರು ಮತ್ತು 332 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇಂದಿನ ಸೋಲಿನೊಂದಿಗೆ ಇಂಗ್ಲೆಂಡ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು, ಇಂಗ್ಲೆಂಡ್ ಪಡೆ ಶೇ.67.0ರಷ್ಟು ಗೆಲುವಿನ ಶೇಕಡಾವಾರು ಮತ್ತು 442 ಅಂಕಗಳನ್ನು ಹೊಂದಿದೆ.

ಈ ಹಿಂದೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಇದೇ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 227ರನ್ ಗಳ ಅಂತರದ ಹೀನಾಯ ಸೋಲು ಕಂಡಿದ್ದ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ರೇಸ್ ನಲ್ಲಿ ಫೈನಲ್ ಪ್ರವೇಶಿಸಲು ಮುಂದಿನ ಪಂದ್ಯವನ್ನು ಗೆಲ್ಲಬೇಕು ಅಥವಾ ಡ್ರಾ ಮಾಡಿಕೊಳ್ಳಲೇ ಬೇಕಾದ ಒತ್ತಡಕ್ಕೆ ಸಿಲುಕಿತ್ತು. ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತದ ಫೈನಲ್ ಆಸೆ ಜೀವಂತವಾಗಿದ್ದು,ಭಾರತ ಒಂದು ಪಂದ್ಯವನ್ನು ಡ್ರಾ ಮಾಡಿ 2-1 ಅಂತರ ಅಥವಾ 3-1 ಅಂತರದಿಂದ ಪಂದ್ಯ ಗೆದ್ದರೆ ಮಾತ್ರ ಫೈನಲ್‌ ಪ್ರವೇಶಿಸಲಿದೆ.

ಮುಂದಿನ ಪಂದ್ಯ ಹೊನಲು ಬೆಳಕಿನ ಪಂದ್ಯವಾಗಿರಲಿದ್ದು, ಫೆಬ್ರವರಿ 24ರಂದು ಅಹ್ಮದಾಬಾದ್ ನಲ್ಲಿ ಈ ಪಂದ್ಯ ನಡೆಯಲಿದೆ.

No Comments

Leave A Comment