Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಮಂಗಳೂರು: ದ.ಕ.ದಲ್ಲಿ 25, ಉಡುಪಿಯಲ್ಲಿ ಆರು ಹೊಸ ಕೊರೋನಾ ಪ್ರಕರಣಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 25 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 34,246ಕ್ಕೆ ಏರಿಕೆಯಾಗಿದೆ. ಈ ಪೈಕಿ 249 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 5,49,211 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,14,965 ನಕಾರಾತ್ಮಕವಾಗಿವೆ. ಜಿಲ್ಲೆಯಲ್ಲಿ 38 ಮಂದಿ ಇಂದು ಬಿಡುಗಡೆ ಒಟ್ಟು ಗುಣಮುಖರಾದವರ ಸಂಖ್ಯೆ 33,257ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 740 ಸಾವುಗಳು ಸಂಭವಿಸಿವೆ.

ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:

ಬುಧವಾರ ಆರು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಸಂಖ್ಯೆ 23,490 ಕ್ಕೆ ಏರಿದೆ. ಈ ಪೈಕಿ 58 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,53,003 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,29,513 ಮಾದರಿಗಳು ನಕಾರಾತ್ಮಕವಾಗಿವೆ.

ಬುಧವಾರ 15 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,243 ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.

No Comments

Leave A Comment