Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಸಿಎಂ ಯಡಿಯೂರಪ್ಪರಿಂದ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಾರ್ಚ್ 8ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾರ್ಚ್ 8 ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ ಎಂದು ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಇಂದು ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ದಿನಾಂಕ ನಿಗದಪಡಿಸಲಾಗಿದ್ದು, ಮಾರ್ಚ್ 8 ರಂದು 2021-22ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು.

ಈಗಾಗಲೇ ಸಿಎಂ ಯಡಿಯೂರಪ್ಪ ಅವರು, ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಹಣಕಾಸಿನ ಇತಿಮಿತಿಯೊಳಗೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಹೇಳುವ ಮೂಲಕ ಭರಪೂರ ನಿರೀಕ್ಷೆಗೆ ಬ್ರೇಕ್ ಹಾಕಿದ್ದಾರೆ.

No Comments

Leave A Comment