Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಫೆ.22ರಂದು ಬಹುಮತ ಸಾಬೀತುಪಡಿಸುವಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿಗೆ ಲೆ.ಗವರ್ನರ್ ಸೂಚನೆ

ಪುದುಚೇರಿ: ಪುದುಚೇರಿಯ ಹೆಚ್ಚುವರಿ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಅಧಿಕಾರ ವಹಿಸಿಕೊಂಡ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆಬ್ರವರಿ 22 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಸಾಬೀತುಪಡಿಸಲು ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ನಿರ್ದೇಶನ ಕೋರಿ ಪ್ರತಿಪಕ್ಷಗಳು ಸಲ್ಲಿಸಿದ ಮನವಿಯ ಬಗ್ಗೆ ತಮಗೆ ಗೊತ್ತಿದೆ ಎಂದಿದ್ದ ತಮಿಳುಸಾಯಿ ಅವರು ಇಂದು ದಿಢೀರ್ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದ್ದಾರೆ.

ಪ್ರಸ್ತುತ, ಕಾಂಗ್ರೆಸ್ ಸರ್ಕಾರ 14 ಶಾಸಕರ ಬೆಂಬಲವನ್ನು ಹೊಂದಿದ್ದರೆ, ಪ್ರತಿಪಕ್ಷ ಸಹ 14 ಶಾಸಕರನ್ನು ಹೊಂದಿದ್ದು,  ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರಿಗೆ ಫೆ.22ರಂದು ಬಹುಮತ ಸಾಬೀತುಪಡಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಫೆಬ್ರುವರಿ 16ರಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಅವರನ್ನು ದಚ್ಯುತಿಗೊಳಿಸಲಾಗಿತ್ತು. ಬಳಿಕ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು.

2016ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 3, ಎಐಎಡಿಎಂಕೆ 7 ಸ್ಥಾನಗಳನ್ನು ಗೆದ್ದಿತ್ತು. ಈಗಾಗಲೇ ನಾಲ್ವರು ಕಾಂಗ್ರೆಸ್‌ ಶಾಸಕರನ್ನು ಸೆಳೆದಿರುವ ಬಿಜೆಪಿ, ಡಿಎಂಕೆ ಪಕ್ಷದ ಮುಖಂಡರಿಗೂ ಗಾಳ ಹಾಕಿದೆ ಎನ್ನಲಾಗಿದೆ. ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ ಜೊತೆ ಬಿಜೆಪಿ ಈ ಸಲ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

No Comments

Leave A Comment