Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಮಹಾರಾಷ್ಟ್ರದಲ್ಲಿ ಎರಡು ರೂಪಾಂತರಿ ಕೊವಿಡ್-19 ತಳಿ ಪತ್ತೆ: ಅಮರಾವತಿಯಲ್ಲಿ ವಾರಾಂತ್ಯ ಲಾಕ್ ಡೌನ್ ಘೋಷಣೆ!

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದು ಹಾಗೂ ಎರಡು ರೂಪಾಂತರಿ ಕೊವಿಡ್-19 ತಳಿ ಪತ್ತೆಯಾಗಿದ್ದು ಜಿಲ್ಲಾಧಿಕಾರಿ ಶೈಲೇಶ್ ನಾವಲ್, ಜಿಲ್ಲೆಯಾದ್ಯಂತ ವಾರಾಂತ್ಯ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ವಾರಾಂತ್ಯದ ದಿನಗಳಾದ ಶನಿವಾರ ರಾತ್ರಿ 8 ರಿಂದ ಸೋಮವಾರ ಬೆಳಿಗ್ಗೆ 7 ವರೆಗೆ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿರುವ ಜಿಲ್ಲಾಧಿಕಾರಿಗಳು, ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಮಾಹಿತಿಯ ಬೆನ್ನಲ್ಲೇ ಯಾವತ್ಮಾಲ್ ಜಿಲ್ಲೆಯಲ್ಲೂ ಸಹ ಕೋವಿಡ್ ನಿರ್ಬಂಧಗಳನ್ನು ಕಠಿಣವಾಗಿ ಪಾಲನೆ ಮಾಡಲು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ ಡಿ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಅಕೋಲ ಜಿಲ್ಲೆಯಲ್ಲೂ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 5,427 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 38 ಸಾವುಗಳು ವರದಿಯಾಗಿವೆ. 2,543 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

No Comments

Leave A Comment