Log In
BREAKING NEWS >
ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡೋದು ಸರಿಯಲ್ಲ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ....

ಕೊರೋನಾ: ರಾಜ್ಯದಲ್ಲಿ 490 ಹೊಸ ಕೇಸ್, ಐವರು ಸಾವು

ಬೆಂಗಳುರು: ರಾಜ್ಯದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 490 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಡನೆ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 9,47,736 ಕ್ಕೆ ಏರಿಕೆ ಕಂಡಿದೆ.

ಇಂದು ಒಟ್ಟಾರೆ 389  ಮಂದಿ ಸೋಂಕಿನಿಂದ ಗುಣಮುಖವಾಗಿದ್ದು ಇದುವರೆಗೆ 9,29,447  ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. ಸಧ್ಯ ರಾಜ್ಯದಲ್ಲಿ 5,836  ಸಕ್ರಿಯ ಪ್ರಕರಣಗಳಿದ್ದು ಅವುಗಳ ಪೈಕಿ 127 ಮಂದಿ ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೊರೋನಾಗೆ ಐದು ಮಂದಿ ಬಲಿಯಾಗಿದ್ದು ಇದುವರೆಗೆ 12,292 ಜನರು ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಇಂದು 278 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು 4 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ ಇನ್ನೊಬ್ಬ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆ.

No Comments

Leave A Comment