Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಮಂಜೇಶ್ವರದ ಪ್ಲೈವುಡ್ ಕಾರ್ಖಾನೆಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಮಂಗಳೂರು: ಇಲ್ಲಿಗೆ ಸಮೀಪದ ಕೇರಳದ ಮಂಜೇಶ್ವರದಲ್ಲಿ ಪ್ಲೈವುಡ್ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬಾಯ್ಲರ್ ಸ್ಫೋಟಿಸಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರೆಲ್ಲರೂ ಬಿಹಾರ ಮೂಲದ ಕಾರ್ಮಿಕರಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ತಕ್ಷಣ ಬೆಂಕಿ ದುರಂತ ಸಂಭವಿಸಿದ್ದರಿಂದ ಕಾರ್ಖಾನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ. ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

No Comments

Leave A Comment