Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಆಸ್ತಿಗಾಗಿ ಕಿರುಕುಳ: ನರಸಾಪುರ ಕೆರೆಗೆ ಜಿಗಿದು ಬೆಂಗಳೂರು ಮೂಲದ ತಾಯಿ-ಮಗಳು ಆತ್ಮಹತ್ಯೆ

ಕೋಲಾರ: ಬೆಂಗಳೂರು ಮೂಲದ ತಾಯಿ, ಮಗಳು ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಹೊರಮಾವು ಮೂಲದ ತಾಯಿ ನಂದಿತಾ (45) ಮತ್ತು ಪುತ್ರಿ ಪ್ರಗತಿ (21) ದುಪ್ಪಟ್ಟ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಂದಿತಾ ಅವರ ಪತಿ ಮೂರು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ಕಿರುಕುಳಕ್ಕೆ‌ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

No Comments

Leave A Comment