Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕೊಲ್ಕತ್ತಾದಲ್ಲಿ ಅಗ್ನಿ ಅವಘಡ: 4 ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಜೀವ ದಹನ!

ಕೋಲ್ಕತಾ: ಬಹುಮಹಡಿ ಕಟ್ಟಡದ 13ನೇ ಮಹಡಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಅಗ್ನಿಶಾಮಕ ದಳ, ರೈಲ್ವೆ ಅಧಿಕಾರಿ, ಆರ್‌ಪಿಎಫ್ ಕಾನ್‌ಸ್ಟೆಬಲ್ ಮತ್ತು ಕೋಲ್ಕತಾ ಪೊಲೀಸರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಬಹುಮಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಎಂಐಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸುಜಿತ್ ಬೋಸ್ ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ಮತ್ತು ಮೃತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಘೋಷಿಸಿತು.

No Comments

Leave A Comment