Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಕ್ರೀಡಾಪಟುಗಳು ಸಾವು

ವಿಜಯಪುರ: ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.

ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.

ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಇನ್ನೂ ಆರು ಕ್ರೀಡಾಪಟುಗಳು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

No Comments

Leave A Comment