Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ: ಸರಣಿಯಲ್ಲಿ 2-1 ಮುನ್ನಡೆ

ಅಹಮದಾಬಾದ್: ಸ್ಟಾರ್ ಆಟಗಾರ ಜೋಸ್ ಬಟ್ಲರ್(ಅಜೇಯ 83) ಹಾಗೂ ಜಾನಿ ಬೇರ್ ಸ್ಟೋ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಇಂಗ್ಲೆಂಡ್ ಮೂರನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವಿರಾಟ್ ಪಡೆಯನ್ನು ಮಣಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ಗೆ 156 ರನ್ ಸೇರಿಸಿತು.
ಸ್ಪರ್ಧಾತ್ಮಕ ಮೊತ್ತ ಹಿಂಬಾಲಿಸಿದ ಇಂಗ್ಲೆಂಡ್ 18.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿ, ಐದು ಪಂದ್ಯಗಳ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.

ಟೀಮ್ ಇಂಡಿಯಾದ ಆರಂಭಿಕರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹಾಗೂ ಕನ್ನಡಿಗ ರಾಹುಲ್ ಉತ್ತಮ ಜೊತೆಯಾಟವನ್ನು ನೀಡಲಿಲ್ಲ.

ರಾಹುಲ್ ಮೂರನೇ ಪಂದ್ಯದಲ್ಲೂ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದರು. ಅಲ್ಲದೆ ಟೂರ್ನಿಯಲ್ಲಿ ಎರಡನೇ ಬಾರಿಗೆ ಸೊನ್ನೆ ಸುತ್ತಿ ನಿರಾಸೆ ಅನುಭವಿಸಿದರು. ಇನ್ನು ರೋಹಿತ್ ಶರ್ಮಾ 15 ರನ್ ಬಾರಿಸಿ ಮುನ್ನುಗುತ್ತಿದ್ದಾಗ ಮಾರ್ಕ್ ವುಡ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ಶಾರ್ಟ್ ಫೈನ್ ಲೆಗ್ ನಲ್ಲಿ ಜೋಫ್ರಾಗೆ ಕ್ಯಾಚ್ ನೀಡಿದರು.

ಕೊನೆಯ ಐದು ಓವರ್ ಗಳಲ್ಲಿ ಟೀಮ್ ಇಂಡಿಯಾ ಅಕ್ಷರ್ ಸಹ ಆರ್ಭಟ ನಡೆಸಿತು. ಒಂದು ಹಂತದಲ್ಲಿ 29 ಎಸೆತಗಳಲ್ಲಿ 28 ರನ್ ಸಿಡಿಸಿದ್ದ ವಿರಾಟ್ ಬಳಿಕ ವಿರಾಟ ರೂಪ ತಾಳಿದರು. ಆರನೇ ವಿಕೆಟ್ ಗೆ ನಾಯಕ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ತಂಡ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಲು ನೆರವಾಯಿತು. ಈ ಜೋಡಿ 35 ಎಸೆತಗಳಲ್ಲಿ 70 ರನ್ ಸೇರಿಸಿತು. ಪರಿಣಾಮ ಭಾರತ 20 ಓವರ್ ಗಳಲ್ಲಿ ಆರು ವಿಕೆಟ್ ಗೆ 156 ರನ್ ಸೇರಿಸಿತು. ಆದರೂ ಆಂಗ್ಲರ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.

No Comments

Leave A Comment