Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ತಮಿಳುನಾಡು ಚುನಾವಣೆ: ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ನಾಮಪತ್ರ ಸಲ್ಲಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಟಿ ಹಾಗೂ ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ಇಂದು ಚೆನ್ನೈನ ತೌಸಂಡ್ಸ್ ಲೈಟ್ಸ್  ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ವಲ್ಲುವರ್ ಕೊಟ್ಟಮ್ ಬಳಿ ಜಾನಪದ ಕಲಾತಂಡಗಳೊಂದಿಗೆ ಖುಷ್ಬೂ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ರೋಡ್  ಶೋ ನಲ್ಲಿ ಪಾಲ್ಗೊಂಡಿದ್ದರು.

ಕಳೆದ ವರ್ಷ ಕಾಂಗ್ರೆಸ್ ತ್ಯಜಿಸಿದ್ದ ಖುಷ್ಬೂ ಬಿಜೆಪಿ ಸೇರಿಕೊಂಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿರುವ ಖುಷ್ಬೂ ಡಿಎಂಕೆ ಅಭ್ಯರ್ಥಿ ಡಾ. ಎಳಿಲನ್ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

ಡಿಎಂಕೆ ಪಕ್ಷದಿಂದ ರಾಜಕೀಯ ಪಯಣ ಆರಂಭಿಸಿದ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದರು. ತದ ನಂತರ 2020 ಅಕ್ಟೋಬರ್ ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ, ಇದೀಗ ಆ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

No Comments

Leave A Comment