Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ತೆಂಕನಿಡಿಯೂರು ಗ್ರಾ. ಪಂ. ದುರಾಡಳಿತ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಉಡುಪಿ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡದೇ ಪಂಚಾಯತ್ ಮುಖ್ಯದ್ವಾರ ಬದಲಾವಣೆ ಮಾಡಿದ್ದನ್ನು ಪ್ರಶ್ನಿಸಿದವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿರುವ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಅಧಿಕಾರ ದುರುಪಯೋಗ ಮಾಡಿದ್ದು ಕೂಡಲೇ ರಾಜೀನಾಮೆ ನೀಡುವಂತೆ ಪಂಚಾಯತ್ ಸದಸ್ಯ ಪ್ರಖ್ಯಾತ್ ಶೆಟ್ಟಿ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಸದಸ್ಯರು ಪಂಚಾಯತ್ ನಲ್ಲಿ ನಡೆದ ತಪ್ಪನ್ನು ಪ್ರಶ್ನಿಸಿದ್ದಕ್ಕೆ ಸೂಕ್ತ ಉತ್ತರ ನೀಡದೇ ಉಡಾಫೆ ವರ್ತನೆಯನ್ನು ಬಿಜೆಪಿ ಬೆಂಬಲಿತ ಅಧ್ಯಕ್ಷರು ಮಾಡುತ್ತ ಬಂದಿದ್ದಾರೆ.

ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಂಡಿಸುವ ಕುರ್ಚಿ ಇರುವ ಸ್ಥಳ ವಾಸ್ತು ಪ್ರಕಾರ ಇಲ್ಲದ ಕಾರಣ, ಅದಕ್ಕಾಗಿ ಪಂಚಾಯತ್ ಮುಖ್ಯದ್ವಾರ ಬದಲಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಪಂಚಾಯತ್ ಆಡಳಿತ ಈ ವರೆಗೆ ಸಾಂಗವಾಗಿ ನಡೆದಿದ್ದು, ಯಾವುದೇ ರೀತಿಯ ಸಮಸ್ಯೆ ಈ ಹಿಂದಿನ ಯಾವುದೇ ಅಧ್ಯಕ್ಷರಿಗೆ ಆಗಿಲ್ಲ. ಕಳೆದ ಆರು ವರ್ಷದಲ್ಲಿ ಬಿಜೆಪಿ ಬೆಂಬಲಿತ ಆಡಳಿತ ಸಮಿತಿ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ದಿ ಕಾಮಗಾರಿ ನಡೆಸದೆ ಜನ ವಿರೋಧಿ ಆಡಳಿತ ನೀಡುತ್ತಿದೆ. ಪಂಚಾಯತ್ ಆಡಳಿತ ಸಂಪೂರ್ಣ ವಿಫಲವಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್, ಪಂಚಾಯತ್ ದುರಾಡಳಿತದ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷ ಯತೀಶ್ ಕರ್ಕೇರ, ಸದಸ್ಯರಾದ ಶರತ್ ಶೆಟ್ಟಿ ಮತ್ತು ಅನುಷಾ ಆಚಾರ್ಯ ಇದ್ದರು

No Comments

Leave A Comment