Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ, ಒಂದೇ ದಿನ 23,179 ಮಂದಿಗೆ ಪಾಸಿಟಿವ್, ಇದು ಈ ವರ್ಷದಲ್ಲೇ ಅತಿ ಹೆಚ್ಚು

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬುಧವಾರ ಹೊಸದಾಗಿ 23,179 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದು 2021 ರಲ್ಲಿ ಇದುವರೆಗಿನ ಅತಿ ಹೆಚ್ಚು ಏಕದಿನ ಸೋಂಕಿನ ಸಂಖ್ಯೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದು 23,179 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 23,70,507ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ 84 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 53,080 ಕ್ಕೆ ಏರಿಕೆಯಾಗಿದೆ.

ಇಂದು 9,138 ರೋಗಿಗಳು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಚೇತರಿಕೆಯ ಸಂಖ್ಯೆಯು 21,63,391ಕ್ಕೆ ತಲುಪಿದೆ.

ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಮೊದಲ ಕೋವಿಡ್-19 ಪ್ರಕರಣ ವರದಿಯಾಗಿತ್ತು. ನಂತರ ದೈನಂದಿನ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗಲು ಆರಂಭಿಸಿತ್ತು ಮತ್ತು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

No Comments

Leave A Comment