ಬೆಂಗಳೂರು: ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92 ) ಅವರು ಬೆಂಗಳೂರಿನ ನಿವಾಸದಲ್ಲಿ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ.
ಈ ಹಿಂದೆ ನಾಗಮಂಗಲ ವಿಧಾನಸಭೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್ ಟಿ ಕೃಷ್ಣಪ್ಪ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದರು. ಎಚ್.ಟಿ. ಕೃಷ್ಣಪ್ಪ ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅನುಯಾಯಿಯಾಗಿದ್ದರು. ಮೃತರ ಅಂತ್ಯಕ್ರಿಯೆಯು ಇಂದು(ಶುಕ್ರವಾರ) ಸಂಜೆ 5 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆ ಹೇಮಾವತಿ ಕ್ವಾಟ್ರಸ್ ಮುಂಭಾಗದ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರಿಂದ ತಿಳಿದು ಬಂದಿದೆ.