Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಹಾಸನ ಬಳಿ ಆಸಿಡ್ ಲಾರಿ ಪಲ್ಟಿ, ಭೀಕರ ದುರಂತದಲ್ಲಿ ಮೂವರ ದುರ್ಮರಣ

ಹಾಸನ : ಹಾಸನ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ನಂತರ ಬೆಂಕಿ ದುರಂತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ.

ಅರಕಲಗೂಡು ತಾಲೂಕಿನ ಬಸವನಹಳ್ಳಿ ಬಳಿ ಆಸಿಡ್ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿ ದಗದಗನೇ ಉರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಜೀವ ದಹನವಾಗಿದ್ದು . ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಮೃತರನ್ನು ಲಾರಿ ಚಾಲಕ ಪುಟ್ಟರಾಜು, ಪ್ರಮೋದ, ಪರಮೇಶ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment