Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ನೆಲ್ಯಾಡಿ: ಭೀಕರ ಅಪಘಾತ- ಲಾರಿ ಚಾಲಕ ಸಜೀವ ದಹನ, ಬಸ್ ಅಗ್ನಿಗಾಹುತಿ

ನೆಲ್ಯಾಡಿ: ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಢಿಕ್ಕಿಹೊಡೆದ ಪರಿಣಾಮ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಮಾರ್ಚ್ 24 ರ ಬುಧವಾರ ತಡರಾತ್ರಿ ನಡೆದಿದೆ.

ಘಟನೆಯ ಪರಿಣಾಮ ಬಸ್ ಸಂಪೂರ್ಣ ಭಸ್ಮಗೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಟ್ರಾವೆಲ್ಸ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಆದರೆ ಬಸ್ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದು ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ

No Comments

Leave A Comment