Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ದುಷ್ಕರ್ಮಿಯಿಂದ ಪೊಲೀಸರ ಮೇಲೆ ಗುಂಡಿನ ದಾಳಿ : ಆರೋಪಿಯ ಬಂಧನ..!

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿ ಮಾಡಿ ಕೊಲೆಗೆ ಯತ್ನಿಸಿದ ದುಷ್ಕರ್ಮಿಯೋರ್ವನನ್ನು ಪೊಲೀಸರ ಬಂಧಿಸಿದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ ಎಂದು ತಿಳಿದು ಬಂದಿದೆ.

ದುಷ್ಕರ್ಮಿಯು ವಿಟ್ಲ ಎಸ್ ಐ ವಿನೋದ್ ರೆಡ್ಡಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಎಸ್.ಐ.ವಿನೋದ್ ರೆಡ್ಡಿ ಅವರಿಗೆ ಗಾಯಗಳಾಗಿವೆ ಎನ್ನಲಾಗಿದೆ.

ವಿಟ್ಲ ಸಮೀಪದ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.ಆಗ ಪೊಲಯ ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ  ಯಾವ ಕಾರಣಕ್ಕೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂಬ ವಿಚಾರ ಇನ್ನಷ್ಟೆ ಬೆಳಕಿಗೆ ಬರಬೇಕಾಗಿದೆ.

ಬಂಧಿತ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಯಲಾಗಿದೆ.

No Comments

Leave A Comment