ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ, ಈಗ ಕೊಲೆಗೆ ಯತ್ನ: ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು
ಬೆಂಗಳೂರು: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳಸಿದ್ದರು ಎಂದು ಆರೋಪಿಸಿದ್ದಾರೆ.
ಇಂದು ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆಎನ್ ಜಗದೀಶ್ ಕುಮಾರ್ ಅವರು ಸ್ವತಃ ಯುವತಿ ಕೈಯಿಂದ ಬರೆದುಕೊಟ್ಟ ದೂರಿನ ಪ್ರತಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀಡಿದರು. ದೂರನ್ನು ಪರಿಶೀಲಿಸಿದ ಆಯುಕ್ತರು, ಪ್ರಕರಣವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವರ್ಗಾಯಿಸಿದ್ದಾರೆ.
ನಾನು ಪೊಲೀಸರಿಗೆ ದೂರು ನೀಡದಂತೆ ತಡೆಯಲು ಯತ್ನಿಸಿದರು ಮತ್ತು ನನ್ನ ಹತ್ಯೆಗೆ ರಮೇಶ್ ಜಾರಕಿಹೊಳಿ ಅವರು ಮುಂದಾಗಿದ್ದರೂ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾರೆ.