Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಬಸ್ ಗಳು ಡಿಕ್ಕಿ: ಮೂವರು ಸಾವು, ಐವರಿಗೆ ಗಂಭೀರ ಗಾಯ

ವಿಜಯನಗರಂ(ಆಂಧ್ರ ಪ್ರದೇಶ): ಆಂಧ್ರಪ್ರದೇಶದ ಈ ಜಿಲ್ಲೆಯ ವಿಜಯನಗರಂ-ವಿಶಾಖಪಟ್ಟಣಂ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್‌ಆರ್‌ಟಿಸಿ)ದ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದು, ಇತರ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಸುಂಕರಿಪೇಟೆ ಗ್ರಾಮದ ಬಳಿ ಎರಡೂ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಎರಡೂ ಬಸ್‌ಗಳಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಎರಡೂ ಬಸ್‌ಗಳ ಚಾಲಕರು ಮತ್ತು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರು ಪ್ರಯಾಣಿಕರನ್ನು ವಿಜಯನಗರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದಲ್ಲಿ ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಸಹ ಒಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ.

No Comments

Leave A Comment