Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಸಿಡಿ ಯುವತಿ ದೂರು: ಎಸ್ಐಟಿಗೆ ವರ್ಗಾಯಿಸಿದ ಕಮಲ್ ಪಂತ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರನ್ನು ಎಸ್ ಐಟಿಗೆ ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂತ್ರಸ್ತ ಯುವತಿ ವಕೀಲ ಜಗದೀಶ್ ಅವರ  ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕವಾಗಿ ಸಂಪರ್ಕಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಮಾ. 26 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು.

ಸದ್ಯ ಈ ದೂರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಎಸ್ ಐಟಿ ಹೆಗಲಿಗೆ ವರ್ಗಾಯಿಸಿದ್ದಾರೆ‌‌. ಇನ್ನು, ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಿಸಲಾಗಿದೆ.

 ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಹಾಜರಾಗಲು ನ್ಯಾಯಾಲಯ ಅನುಮತಿ ನೀಡಿದ್ದು ಇಂದು ಯುವತಿ ನ್ಯಾಯಾಧೀಶರ ಎದುರು ಹಾಜರಾಗುವ ಸಾಧ್ಯತೆ ಇದೆ.

No Comments

Leave A Comment