Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಸಂಗೀತ ನಿರ್ದೇಶಕ ಬಪ್ಪಿ ಲಹರಿ ಅವರಿಗೆ ಕೊರೋನಾ ಸೋಂಕು

ಮುಂಬೈ: ಪ್ರಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದರೂ, ದುರದೃಷ್ಟವಶಾತ್‌ ಬಪ್ಪಿ ಲಹರಿ ಅವರಿಗೆ ಪರೀಕ್ಷೆಯಲ್ಲಿ ಕೋವಿಡ್‌–19 ಪಾಸಿಟಿವ್ ಇರುವುದು ತಿಳಿದಿದೆ. ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ತಜ್ಞರು ಅವರ ಮೇಲೆ ನಿಗಾವಹಿಸಿದ್ದಾರೆ.

ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗುವಂತೆ ಕುಟುಂಬ ವರ್ಗ ಕೋರಿದೆ. ಬಪ್ಪಿ ದಾದಾ ಎಲ್ಲ ಅಭಿಮಾನಿಗಳ ಆಶೀರ್ವಾದ ಮತ್ತು ಹಾರೈಕೆ ಕೋರಿದ್ದಾರೆ…’ ಎಂದು ಬಪ್ಪಿ ಲಹರಿ ಅವರ ವಕ್ತಾರರು ತಿಳಿಸಿದ್ದಾರೆ.

No Comments

Leave A Comment