Log In
BREAKING NEWS >
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ...

ತಮಿಳುನಾಡು ಚುನಾವಣೆ: ಖುಷ್ಬೂ ಸುಂದರ್ ಪರ ಅಮಿತ್ ಶಾ ಭರ್ಜರಿ ರೋಡ್ ಶೋ, ಡಿಎಂಕೆ ವಿರುದ್ಧ ವಾಗ್ದಾಳಿ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಬ್ಬರ ಜೋರಾಗಿ ಸಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ತೌಸ್ಸಂಡ್ ಲೈಟ್ಸ್  ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಂಶಪಾರಂಪರ್ಯ ಹಾಗೂ ಭ್ರಷ್ಟತೆಯಿಂದ ಕೂಡಿರುವ ಡಿಎಂಕೆ- ಕಾಂಗ್ರೆಸ್ ನ್ನು ಚುನಾವಣೆಯಲ್ಲಿ ಸೋಲಿಸಿದಾಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿಯಾಗಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಅವರ ಕನಸನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮಾತ್ರ ಸಾಧ್ಯ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಒಳ್ಳೆಯ ಕೆಲಸ ಮಾಡಿದ್ದಾರೆ. ಡಂಬಲ್ ಎಂಜಿನ್ ಸರ್ಕಾರ ರಚಿಸುವಂತೆ ಜನರಲ್ಲಿ ಮನವಿ ಮಾಡುವುದಾಗಿ ಅಮಿತ್ ಶಾ ತಿಳಿಸಿದರು.

No Comments

Leave A Comment