Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಮಾರ್ಗಸೂಚಿ ಜಾರಿ ವಿಷಯದಲ್ಲಿ ಯಾವುದೇ ರಾಜಿಯಿಲ್ಲ; ನಿಮ್ಮ ಸಹಕಾರ ಬೇಕು: ಸಚಿವ ಸುಧಾಕರ್ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನೂತನ ಮಾರ್ಗಸೂಚಿ ಕ್ರಮಗಳು ಏಕಾಏಕಿ ಜಾರಿಗೆ ತಂದಿಲ್ಲ ನಿಯಮ ಜಾರಿ ವಿಷಯದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ 2ನೇ ಅಲೆ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿ ಹೋಗದಂತೆ ಕ್ರಮ ಕೈಗೊಳ್ಳು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ಯಾವುದೆ ರಾಜಿ ಇಲ್ಲ. ಇದು ಏಕಾಏಕಿ ಮಾಡಿದ ನಿಯಮ ಅಲ್ಲ ಎಂದರು.

ಇನ್ನೆರಡು ತಿಂಗಳು ಕೊರೋನಾ ಆರ್ಭಟ ಇರಲಿದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಇದರಿಂದಾಗಿ ಪರಿಸ್ಥಿತಿ ಕೈ ಮೀರಬಾರದೆಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಳೆದು ತೂಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದರು.

ಇಂದೇ ಸಂದರ್ಭದಲ್ಲಿ ಮಕ್ಕಳಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಥಿಯೇಟರ್ ನಿಯಮ ಬದಲಾವಣೆ ಪ್ರಶ್ನೆಯೇ ಇಲ್ಲ. 8 ಜಿಲ್ಲೆಗಳ ಥಿಯೇಟರ್ ಗಳಲ್ಲಿ ಶೇ.50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.

ಈಗ ಮಾಡಿರುವ ನಿಯಮ ತಾತ್ಕಾಲಿಕ ಮಾತ್ರವಾಗಿದೆ. ಗೈಡ್ ಲೈನ್ಸ್ ಜಾರಿ ವಿಷಯದಲ್ಲಿ ರಾಜಿ ಇಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ ಧಾರ್ಮಿಕ ಕ್ಷೇತ್ರಗಳಲ್ಲೂ ಕಠಿಣ ಕ್ರಮಕೈಗೊಳ್ಳಲಾಗಿದೆ ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆ ಎಂದೂ ಸಚಿವರು ಹೇಳಿದರು.

‘ಈಗ ಲಸಿಕೆ ಸಹ ಲಭ್ಯವಿರುವುದರಿಂದ ಹೆಚ್ಚು ಮಂದಿ ಲಸಿಕೆ ಪಡೆದು, ಕೆಲವು ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಿಬೇಕು. ನಿಮ್ಮೆಲ್ಲರ ಸಹಕಾರದಿಂದ ಪ್ರಕರಣಗಳು ಕಡಿಮೆಯಾದರೆ ಮತ್ತೆ ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಪುನರಾರಂಭಿಸಬಹುದು. ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದೆ. ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು’ ಎಂದು ಅವರು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.

No Comments

Leave A Comment