Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಭಾರತದಲ್ಲಿ ತೀವ್ರ ಸ್ವರೂಪ ಪಡೆಯುತ್ತಿರುವ ಕೊರೋನಾ 2ನೇ ಅಲೆ: ದೇಶದಲ್ಲಿಂದು ಬರೋಬ್ಬರಿ 93,249 ಹೊಸ ಕೇಸ್ ಪತ್ತೆ!

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದೇಶದಲ್ಲಿಂದು ಬರೋಬ್ಬರಿ 93,249 ಹೊಸ ಕೇಸ್ ಪತ್ತೆಯಾಗಿದೆ. ಇದು ಆರೂವರೆ ತಿಂಗಳಲ್ಲೇ ಏಕದಿನದಲ್ಲಿ ದಾಖಲಾದ ಅತೀ ಹೆಚ್ಚಿನ ಸಂಖ್ಯೆಯಾಗಿದೆ.

ಇನ್ನು ಒಂದೇ ದಿನ 513 ಮಂದಿ ಸಾವನ್ನಪ್ಪಿದ್ದು, ಅದರೊಂದಿಗೆ ದೇಶದಲ್ಲಿ ಕೊರೋನಾಗೆ ಈ ವರೆಗೂ ಬಲಿಯಾದವರ ಸಂಖ್ಯೆ 1,64,623ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೇಶದಲ್ಲಿ ಕಳೆದ 24 ದಿನಗಳಿಂದ ಕೊರೋನಾ ಸೋಂಕು ನಿತ್ಯ ಏರಿಕೆಯಾಗುತ್ತಿದೆ. ಇದರಂತೆ ದೇಶದಲ್ಲಿ ಈ ವರೆಗೂ ಒಟ್ಟಾರೆ ಸೋಂಕಿತರ ಸಂಖ್ಯೆ 1,24,85,509ಕ್ಕೆ ಏಱಿಕೆಯಾಗಿದೆ ಎಂದು ಹೇಳಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 60,048 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈ ವರೆಗು ಒಟ್ಟಾರೆ 1,16,29,289 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಪ್ರಸ್ತುತ 6,91,597 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಈ ನಡುವೆ ಭಾರತದಲ್ಲಿ ಒಂದೇ ದಿನ 11,66,716 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,81,25,908 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 7,59,79,651 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

No Comments

Leave A Comment