Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಆರ್ ಸಿಬಿ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಕೋವಿಡ್-19 ಪಾಸಿಟಿವ್ ದೃಢ!

ಚೆನ್ನೈ: ಆರ್ ಸಿಬಿ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಆರ್ ಸಿಬಿ ಆರಂಭಿಕ ಆಟಗಾರನನ್ನು ಉಳಿದ ಆಟಗಾರರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪಡಿಕ್ಕಲ್ ಕಳೆದ ಆವೃತ್ತಿಯಲ್ಲಿ ಆರ್ ಸಿಬಿಗೆ ದೊಡ್ಡ ಸ್ಟಾರ್ ಆಗಿ ಕಾಣಿಸಿಕೊಂಡಿದ್ದರು. ಟಾಪ್ ಆರ್ಡರ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆರ್ ಸಿಬಿ ಪ್ಲೇ ಆಫ್ ತಲುಪುವಂತೆ ಮಾಡುವಲ್ಲಿ ಪಡಿಕ್ಕಲ್ ಅವರ ಪಾತ್ರ ದೊಡ್ಡದಿದೆ. ಅವರ ಅಲಭ್ಯ ಆರ್ ಸಿಬಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆಯಿದೆ.

ಸದ್ಯ ಪಡಿಕ್ಕಲ್ ಕ್ವಾರಂಟೈನ್ ನಲ್ಲಿರುವುದರಿಂದ ಏಪ್ರಿಲ್ 9 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ನಡುವಣದ ಉದ್ಘಾಟನಾ ಪಂದ್ಯದಲ್ಲಿ ಆಡುವ ಅನುಮಾನವಿದೆ.

ಪಡಿಕ್ಕಲ್ ಕೊರೋನಾ ಸೋಂಕು ತಗುಲಿರುವ ಐಪಿಎಲ್ ನ ಮೂರನೇ ಆಟಗಾರರಾಗಿದ್ದಾರೆ. ಇದಕ್ಕೂ ಕೊಲ್ಕತ್ತಾ ನೈಟ್ ರೈಡರ್ಸ್ ಆಟಗಾರ ನಿತಿತ್ ರಾಣಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನ ಅಕ್ಷರ್ ಪಟೇಲ್ ಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು.

ರಾಣಾಗೆ ನೆಗೆಟಿವ್ ವರದಿ ಬಂದ ಬಳಿಕ ತಂಡಕ್ಕೆ ಮರು ಸೇರ್ಪಡೆಯಾಗಿದ್ದಾರೆ. ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ನ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.

No Comments

Leave A Comment