Log In
BREAKING NEWS >
ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ ...

ಹುಲಿ ಚರ್ಮ ಅಕ್ರಮ ಸಾಗಾಟ : 7 ಮಂದಿಯ ಬಂಧನ

ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಬ್ಯೆಕ್ ನಲ್ಲಿ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿರುತ್ತದೆ.

ಹುಬ್ಬಳ್ಳಿ ಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಎರಡು ಬೈಕ್ ನಲ್ಲಿ ಐದು ಮಂದಿ ಹುಲಿ ಚರ್ಮ ಸಾಗಿಸುತ್ತಿದ್ದರು. ಐದು ಮಂದಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಇಬ್ಬರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಅಕ್ರಮ ಜಾಲದ ಒಟ್ಟು 7 ಮಂದಿ ಯುವಕರನ್ನು ಬಂಧಿಸಿ ಎರಡು ಬ್ಯೆಕ್ ಮೊಬ್ಯೆಲ್ ವಶ ಪಡಿಸಿಕೊಳ್ಳಲಾಗಿದೆ.

ಹೆಬ್ರಿ ಸಬ್ ಇನ್ಸ್ ಪೆಕ್ಟರ್ ಮಹೇಶ್ ಟಿ.ಎಂ ಕೇಸು ದಾಖಲಿಸಿದ್ದಾರೆ. ಆರೋಪಗಳನ್ನು ನ್ಯಾಯಾಲಯಕ್ಕೆ ಮಂಗಳವಾರ ಸಂಜೆ ಹಾಜರು ಪಡಿಸಲಾಗುತ್ತದೆ. ನ್ಯಾಯಾಲಯದ ಮಾರ್ಗದರ್ಶನ ದಂತೆ ಮುಂದಿನ ತನಿಖೆ ನಡೆಯಲಿದೆ ಎಂದು ಡಿವೈಎಸ್ ಪಿ ಭರತ್ ರೆಡ್ಡಿ ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆ ಸಬ್ ಇನ್ಸ್ ಫೆಕ್ಟರ್ ಮಧು ಮತ್ತು ಹೆಬ್ರಿಯ ಮಹೇಶ್ ಮತ್ತವರ ತಂಡ ಕಾರ್ಯಚರಣೆ ನಡೆಸಿದ್ದಾರೆ.

ಸ್ಥಳಕ್ಕೆ ಉಡುಪಿ ಎಸ್ ಪಿ ವಿಷ್ಣುವರ್ಧನ್, ಕಾರ್ಕಳ ಡಿವೈಎಸ್ ಪಿ ಭರತ್ ರೆಡ್ಡಿ ಭೇಟಿ ನೀಡಿ ಮುಂದಿನ‌ ತನಿಖೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ.

No Comments

Leave A Comment