Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರು

ಕೋಲ್ಕತಾ: ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮೂಲಗಳು ಗುರುವಾರ ತಿಳಿಸಿವೆ.

ಸಭೆಯಲ್ಲಿ ಮುಖ್ಯಮಂತ್ರಿಗಳ ಬದಲಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಉಪಸ್ಥಿತರಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವುದರಿಂದ ಪ್ರಧಾನಿ ಕರೆದ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.

ಭಾರತದಲ್ಲಿ ಕೊರೋನಾ 2ನೇ ಅಲೆಯ ಪ್ರತಾಪ ಮುಂದುವರೆದಿದ್ದು, ಗುರುವಾರ ದೇಶದಲ್ಲಿ ದಾಖಲೆಯ 1.26 ಲಕ್ಷ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಯಾವುದೇ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಮಾಣವಾಗಿದೆ.

No Comments

Leave A Comment