Log In
BREAKING NEWS >
ಯಶಸ್ವಿಯಾಗಿ ಮುಗಿದ ಎಸ್ಎಸ್ಎಲ್ ಸಿ ಪರೀಕ್ಷೆ: ಆಗಸ್ಟ್ 10 ರಂದು ಫಲಿತಾಂಶ.....ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ...

ಅಕ್ರಮ ಚಿನ್ನ ಸಾಗಾಟ : ಕಸ್ಟಮ್ಸ್ ಅಧಿಕಾರಿಗಳಿಂದ ಓರ್ವನ ಬಂಧನ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.

ದುಬೈ ನಿಂದ ಬಂದಿದ್ದ ಕೇರಳ ಕಾಸರಗೋಡು ನಿವಾಸಿ ಇಬ್ರಾಹಿಂ ಅಬ್ದುಲ್ಲಾ ಎಂಬವ ಬಂಧಿತ ಆರೋಪಿ‌ ಎಂದು ತಿಳಿದು ಬಂದಿದೆ.

ಸ್ಪೈಸ್ ಜೆಟ್ ವಿಮಾನ ಮೂಲಕ ದುಬೈ ನಿಂದ ಮಂಗಳೂರಿಗೆ ಬಂದಿಳಿದಿದ್ದ ಇಬ್ರಾಹಿಂ ಅಬ್ದುಲ್ಲಾ ನಿಂದ 30 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಒಳ ಉಡುಪಿನಲ್ಲಿ  ಚಿನ್ನ ಅವಿತಿಟ್ಟು ಸಾಗಾಟಕ್ಕೆ ಯತ್ನ ಮಾಡುವಾಗ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ವಶ ಪಡಿಸಿಕೊಂಡಿದ್ದಾರೆ.

No Comments

Leave A Comment