Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಸಿಡಿ ಪ್ರಕರಣ: ಎಸ್ಐಟಿಗೆ ದಾಖಲೆ, ವಿಡಿಯೋ ಸಲ್ಲಿಸಿದ ಯುವತಿ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಸಂತ್ರಸ್ತ ಯುವತಿ ವಿಡಿಯೋ ಹಾಗೂ ದಾಖಲೆಗಳನ್ನು ಸಲ್ಲಿಸಿದ್ದಾಳೆಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂದೆ ವಿಶೇಷ ತನಿಖಾ ದಳದ ಎದುರು ಸೋಮವಾರ ಯುವತಿ ಹಾಜರಾಗಿದ್ದು, ಈ ವೇಳೆ ನ್ಯಾಯಾಧೀಶರ ಎದುರು ಮೊದಲು ನೀಡಿದ್ದ ಹೇಳಿಕೆಗೆ ತದ್ವಿರುದ್ಧವಾಗಿ ಹೇಳಿಕೆ ನೀಡಿದ್ದಾಳೆಂದು ಹೇಳಲಾಗುತ್ತಿದೆ. ಆದರೆ, ಇದನ್ನು ಯುವತಿಯ ಪರ ವಕೀಲರು ಬಲವಾಗಿ ನಿರಾಕರಿಸಿದ್ದಾರೆ. ಯುವತಿ ಅಂತಹ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ ನೀಡಿ, ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಯುವತಿ ಎಸ್ಐಟಿ ಮುಂದೆ ಹಾಜರಾಗಿದ್ದಳು. ಜಾರಕಿಹೊಳಿ ವಿರುದ್ಧ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

No Comments

Leave A Comment