Log In
BREAKING NEWS >
ಸೋಮವಾರದಿ೦ದ ಚಿನ್ನಾಭರಣದ ಅ೦ಗಡಿ ಅಲ್ ಲಾಕ್ -ಚಿನ್ನ ಖರೀದಿಸಲೊ೦ದು ಅವಕಾಶ...

ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಆರು ಮಂದಿ ತಂಡದ ಬ೦ಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮೂಡಬಿದಿರೆ,ಮುಲ್ಕಿ,ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ,ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಆರು ಮಂದಿಯ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ರಾಕೇಶ್,ಅರ್ಜುನ್, ಮೋಹನ್, ಮುಹಮ್ಮದ್, ಝಭೈರ್,ಇಬ್ರಾಹಿಂ, ಲತೀಫ್,ಮತ್ತು ಮನ್ಸೂರ್ ಬೋಳಿಯಾರ್ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕಾರು,ಮೊಬೈಲ್, ಫೋನ್ ಗಳು, ಏರ್ ಗನ್,ಚಿನ್ನ,ಬೆಳ್ಳಿ ಸೇರಿದಂತೆ ಒಟ್ಟು 41.82 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಮಂಗಳೂರು ನಗರದಲ್ಲಿ 7,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8,ಹಾಸನದಲ್ಲಿ 2,ಚಿಕ್ಕಮಗಳೂರು3, ಕೊಡಗು5,ಉಡುಪಿ 2,ಮತ್ತು ಬೆಂಗಳೂರು ನಗರದಲ್ಲಿ 1 ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

No Comments

Leave A Comment