ಉಡುಪಿ: ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ – ಕಳ್ಳರು ಸ್ಥಳದಲ್ಲೇ ಕಾರು ಬಿಟ್ಟು ಪರಾರಿ
ಉಡುಪಿ: ಉಡುಪಿ ಸಮೀಪದ ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಬಂದ ಕಳ್ಳರ ತಂಡವೊಂದು ಕಳವಿಗೆ ಯತ್ನಿಸಿ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ವೀರಾಂಜನೆಯ ವ್ಯಾಯಾಮ ಶಾಲೆಗೆ ಸೇರಿದ ದೇವಸ್ಥಾನ ಇದಾಗಿದ್ದು, ಏ.16ರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ರಿಜಿಸ್ಟ್ರೇಶನ್ ಕಾರು ಇದಾಗಿದೆ.