Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ದೆಹಲಿಯಲ್ಲಿ ಕೊರೋನಾ ದಾಖಲೆ: ಒಂದೇ ದಿನ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದಾಖಲು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತನ್ನ ಅಬ್ಬರ ಮುಂದುವರೆಸಿದ್ದು, ಒಂದೇ ದಿನದಲ್ಲಿ ದಾಖಲೆಯ 25 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,462 ಸೊಂಕು ಪ್ರಕರಣಗಳು ದಾಖಲಾಗಿದ್ದು, ಇದು ಈ ವರೆಗಿನ ಗರಿಷ್ಠ ದೈನಂದಿನ ಪ್ರಕರಣಗಳಾಗಿವೆ. ಆ ಮೂಲಕ ದೆಹಲಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 8,53,460ಕ್ಕೆ ಏರಿಕೆಯಾಗಿದೆ. ನಿನ್ನೆ ದೆಹಲಿಯಲ್ಲಿ 20,159 ಸೋಂಕಿತರು ಗುಣಮುಖರಾಗಿದ್ದು, ಆ  ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 7,66,398ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ನಿನ್ನೆ 161 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ನಿಂದ ಸಾವಿಗೀಡಾದವರ ಒಟ್ಟಾರೆ ಸಂಖ್ಯೆ 12,121ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೆಹಲಿಯಲ್ಲಿ 74,941 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೆಹಲಿಯ ಸೋಂಕು ಸಕಾರಾತ್ಮಕ ಪ್ರಮಾಣ ಕೂಡ ಶೇ.29.74ಕ್ಕೆ ಏರಿಕೆಯಾಗಿದೆ.

No Comments

Leave A Comment