Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಪಿಯೂಷ್ ಗೋಯಲ್

ನವದೆಹಲಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

 2ಎ ಹಂತದಲ್ಲಿ  ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂವರೆಗೆ ಹಾಗೂ 2ಬಿ ಹಂತದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.

ಒಟ್ಟಾರೇ, 58.19 ಕಿಲೋ ಮೀಟರ್ ಉದ್ದದ ಈ ಯೋಜನೆಗೆ ಒಟ್ಟಾರೇ. 14,788,101 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಪಿಯೂಷ್ ಗೋಯಲ್  ಮಾಹಿತಿ ನೀಡಿದ್ದಾರೆ.

No Comments

Leave A Comment