Log In
BREAKING NEWS >
ಮಂಗಳೂರು ಕಡಲ ತೀರದಲ್ಲಿ ಟೌಕ್ಟೇ ಚಂಡಮಾರುತ ಅಬ್ಬರಕ್ಕೆ ಸಿಲುಕಿದ್ದ 9 ಮಂದಿಯ ರಕ್ಷಣೆ: ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ...

ನದೀಮ್-ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಗೆ ಕೊರೋನಾ ಪಾಸಿಟಿವ್, ಆರೋಗ್ಯ ಗಂಭೀರ!

ಮುಂಬೈ: ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಗೆ ಕೋವಿಡ್- 19 ಪಾಸಿಟಿವ್ ಪರೀಕ್ಷೆ ನಂತರ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಅವರ  ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಮಗ ಸೋಮವಾರ ಹೇಳಿದ್ದಾರೆ.

66 ವರ್ಷದ ಸಂಗೀತ ನಿರ್ದೇಶಕರು ಪ್ರಸ್ತುತ ಮುಂಬೈಯ ಎಸ್ ಎಲ್ ರಹೇಜಾ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಅವರ ಮಗ ಸಂಜೀವ್ ರಾಥೋಡ್ ಹೇಳಿರುವುದಾಗಿ ಪಿಐಟಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುಂದಿನ 24 ಗಂಟೆಗಳ ಕಾಲ ಅವರನ್ನು ನಿಗಾವಣೆಯಲ್ಲಿ ಇಟ್ಟಿರುವುದಾಗಿ ವೈದ್ಯರು ಹೇಳಿರುವುದಾಗಿ ಸಂಜೀವ್ ರಾಥೋಡ್ ತಿಳಿಸಿದ್ದಾರೆ.  ಶ್ರವಣ್ ರಾಥೋಡ್ ಅವರ ಚೇತರಿಕೆಗಾಗಿ ಪ್ರಾರ್ಥಿಸೋಣ ಎಂದು ಸಂಗೀತ ನಿರ್ದೇಶಕ ನದೀಮ್ ಸೈಫಿ ಇನ್ಸಾಟಾಗ್ರಾಮ್ ನಲ್ಲಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನದೀಮ್- ಶ್ರವಣ್ 90ರ ದಶಕದಲ್ಲಿ ಪ್ರಖ್ಯಾತ ಸಂಗೀತ ಸಂಯೋಜಕರು. ಆಶಿಕಿ, ಸಜಾನ್, ಅಮಿರ್ ಖಾನ್ ಅಭಿನಯದ ರಾಜ ಹಿಂದೂಸ್ತಾನಿಯಂತಹ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು.

No Comments

Leave A Comment