Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ

ಶಹಜಹಾನಪುರ (ಉತ್ತರ ಪ್ರದೇಶ): ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.

ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿ ಸಮೀಪ ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ಗೇಟು ಮುಚ್ಚದ ಕಾರಣ ಈ ಅವಘಡ ಸಂಭವಿಸಿದೆ.

ಲಕ್ನೊ-ಚಂಡೀಘಡ ಸೂಪರ್ ಫಾಸ್ಟ್ ಲೊಕೊಮೊಟಿವ್ ರೈಲು ವಾಹನಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಇದೀಗ ಎರಡೂ ಕಡೆ ರೈಲು ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.

ಮೀರನ್ ಪುರ್ ಕತ್ರ ರೈಲ್ವೆ ನಿಲ್ದಾಣವನ್ನು ಇಂದು ಬೆಳಗ್ಗೆ ರೈಲು ದಾಟಿದ ಮೇಲೆ ಈ ದುರ್ಘಟನೆ ನಡೆದಿದ್ದು ರೈಲು ಎರಡು ಟ್ರಕ್, ಕಾರು ಮತ್ತು ಬೈಕ್ ಮೇಲೆ ಹರಿದಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ಮುಂದುವರಿದಿದೆ ಎಂದು ರೈಲ್ವೆ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಎಂಜಿನಿಯರ್ ಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. ಹಾನಿಗೀಡಾಗಿರುವ ಹಳಿಯ ಕೆಲಸ ನಡೆಯುತ್ತಿದೆ. ಮುಂದಿನ ಮೂರ್ನಾಲ್ಕು ಗಂಟೆಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಲಕ್ನೊದಲ್ಲಿರುವ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

No Comments

Leave A Comment