Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ರಾಜ್ಯಾದ್ಯಂತ ನಾಳೆ ರಾತ್ರಿಯಿಂದ ಮುಂದಿನ 14 ದಿನ ಕೊರೋನಾ ಕರ್ಫ್ಯೂ: ಮುಖ್ಯಮಂತ್ರಿ ಬಿಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಈ ನಿಯಮ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೋವಿಡ್- ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಮುತ್ತ ಜಾಸ್ತಿಯಾಗುತ್ತಿದೆ.ಸಚಿವ ಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ 18 ರಿಂದ 45 ವಯಸ್ಸಿನೊಳಗಿರುವವರಿಗೆ ಲಸಿಕೆಯನ್ನು ಉಚಿತವಾಗಿ ಪೂರೈಕೆ ನೀಡಲಾಗುವುದು. ನಾಳೆ ರಾತ್ರಿಯಿಂದ ಇಡೀ ರಾಜ್ಯಾದಂತ್ಯ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಬೆಳಿಗ್ಗೆ 6 ರಿಂದ 10 ಗಂಟೆ ನಡುವೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರೆಯಲಿದೆ. ಗಾರ್ಮೆಂಟ್ಸ್ ನೌಕರರನ್ನು ಹೊರತುಪಡಿಸಿ, ಉತ್ಪಾದನಾ, ಕ್ಷೇತ್ರ, ಕೃಷಿ, ಕಟ್ಟಡ ವೈದ್ಯಕೀಯ ಚಟುವಟಿಕೆಗಳು ಮುಂದುವರೆಯುತ್ತದೆ.

ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕರ್ಫ್ಯೂ ಮುಂದುವರೆಯಲಿದೆ. ತಾಲೂಕು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಲಾಗಬೇಕು. ಈ ಅವಧಿಯಲ್ಲಿ ಬಿಎಂಟಿಸಿ,ಕೆಎಸ್ ಆರ್ ಟಿಸಿ ಸೇರಿದಂತೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿರುವುದಿಲ್ಲ. ಅಂತರ್ ರಾಜ್ಯ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಆದರೆ. ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. 800 ಮೆಟ್ರಿಕ್ ಟನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಸಂದರ್ಭದಲ್ಲಿ ತಿಳಿಸಿದರು.

No Comments

Leave A Comment