Log In
BREAKING NEWS >
ನ. 21ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವಿಶ್ವರೂಪದರ್ಶನ"ಜರಗಲಿದೆ...

ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಉದ್ಯಮಿಯ ಬರ್ಬರ ಹತ್ಯೆ

ಮಂಗಳೂರು : ರಿಯಲ್ ಎಸ್ಟೇಟ್ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉತ್ತರ ಕನ್ನಡ ಶಿರಸಿ ಮೂಲದ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿಯಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿ ಪರಾರಿಯಾಗಿದೆ.

ಸುದರ್ಶನ್ ಅಲಿಯಾಸ್ ಹರ್ಷ ರಾಣೆ ಕೊಲೆಗೀಡಾಗಿರುವ ಉದ್ಯಮಿ. ಬೈಕ್​ನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದ್ವಿಚಕ್ರ ವಾಹನಕ್ಕೆ ಡಿಕ್ಕಿ‌ ಹೊಡೆದಿದ್ದಾರೆ. ಈ ವೇಳೆ ಕೆಳಗೆ ಬಿದ್ದ ಹರ್ಷ ಮೇಲೆ ಇಬ್ಬರು ತಲ್ವಾರ್​ನಿಂದ​ ಕೊಚ್ಚಿ ಕೊಲೆ ಮಾಡಿದ್ದಾರೆ.

ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಉದ್ಯಮ ನಡೆಸುತ್ತಿದ್ದರು ಹಾಗೂ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Ad2

No Comments

Leave A Comment